ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 204 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 463 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.
ಈ ಹಿಂದೆ ಕಳುಹಿಸಲಾದ 117 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 117 ಕೂಡ ನೆಗೆಟಿವ್ ಬಂದಿವೆ. ಈವರೆಗೆ 1356 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 17 ಪಾಸಿಟಿವ್ ಮತ್ತು 1339 ನೆಗೆಟಿವ್ ಬಂದಿವೆ. ಇಂದು 31 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,386 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
10 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ, 50 ಮಂದಿ ಎನ್ಐಟಿಕೆ ಕ್ವಾರಂಟೈನ್ನಲ್ಲಿಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಕ್ವಾರಂಟೈನ್ ಪೂರೈಸಿದ್ದಾರೆ . ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಸಾವನ್ನಪ್ಪಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.