ETV Bharat / city

ಕಟೀಲಿನಲ್ಲಿ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಇ-ಟಿಕೆಟ್: ರಾಜ್ಯದಲ್ಲೇ ಮೊದಲ ಪ್ರಯೋಗ

author img

By

Published : Jun 11, 2020, 5:02 PM IST

ಲಾಕ್​​​ಡೌನ್​​​ನಿಂದಾಗಿ ಮುಚ್ಚಲ್ಪಟ್ಟಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದೇವಸ್ಥಾನಕ್ಕೆ ಭಕ್ತರು ದೇವಸ್ಥಾನದ ವೆಬ್‌ಸೈಟ್‌ನಿಂದ ಉಚಿತವಾಗಿ ಇ-ಟಿಕೆಟ್ ಪಡೆದು ದೇವಸ್ಥಾನ ಪ್ರವೇಶಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವರ ದರ್ಶನಕ್ಕೆ ಇ-ಟಿಕೆಟ್​ ನೀಡುವ ಪ್ರಕ್ರಿಯೆ ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ.

temple
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ಮಂಗಳೂರು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರವೇಶಕ್ಕೆ ಇ-ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ. ಇದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ.

ಲಾಕ್​​​ಡೌನ್​​​ನಿಂದಾಗಿ ಮುಚ್ಚಲ್ಪಟ್ಟಿದ್ದ ಕಟೀಲು ದೇವಸ್ಥಾನಕ್ಕೆ ಜೂನ್ 14 ರಿಂದ ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ, ಭಕ್ತರು ದೇವಸ್ಥಾನದ ವೆಬ್‌ಸೈಟ್‌ನಿಂದ ಉಚಿತವಾಗಿ ಇ-ಟಿಕೆಟ್ ಪಡೆದು ದೇವಸ್ಥಾನ ಪ್ರವೇಶಿಸಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಾಲಿಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಲು ಮತ್ತು ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇದೆ. ಇದಕ್ಕೆ ಸಿದ್ಧತೆ ಮಾಡಬೇಕಾದ ಕಾರಣ ಜೂನ್​ 8ರಂದು ತೆರೆಯಬೇಕಿದ್ದ ದೇಗುಲವನ್ನು ಜೂನ್ 14ರಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆಯಲು ಇ-ಟಿಕೆಟ್​ ವ್ಯವಸ್ಥೆ

ಇ-ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ. ಭಕ್ತರು ವೆಬ್​​ಸೈಟ್ ಮೂಲಕ ಹೆಸರು ನೋಂದಾಯಿಸಿ ದೇಗುಲಕ್ಕೆ ಬರಬಹುದು. ಪ್ರತಿ 15 ನಿಮಿಷಕ್ಕೆ 60 ಮಂದಿಗೆ ಭೇಟಿಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ ಸಂಜೆ 7.30ರ ತನಕ ಪ್ರವೇಶಕ್ಕೆ ಅವಕಾಶ ಇರಲಿದೆ.

ಸ್ಥಳೀಯ ಭಕ್ತರು ಇ-ಪಾಸ್ ಇಲ್ಲದೆಯೇ ದೇಗುಲಕ್ಕೆ ಭೇಟಿ ನೀಡಬಹುದು. ಆದ್ರೆ ದೇಗುಲದಲ್ಲಿ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲವೆಂದು ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.