ಮಂಗಳೂರು: ಬಂಟ್ವಾಳ ತಾಲೂಕಿನ ಮೇರೆಮಜಲುವಿನ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆತನ ಪತ್ನಿ ಮೇಲೆ ತಂಡವೊಂದು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಮೇರೆಮಜಲು ನಿವಾಸಿ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಗಾಯಗೊಂಡಿದ್ದು,ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಸುಮಾರು 4 ಗಂಟೆಯ ವೇಳೆ ಮೂವರ ತಂಡ ಯೋಗೀಶ್ ಪ್ರಭು ಅವರ ಮನೆಗೆ ಬಂದು ಬಾಗಿಲು ತೆರೆಯುವಂತೆ ಹೇಳಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಮನೆಯೊಳಗೆ ನುಗ್ಗಿದ ಮೂವರು, ಏಕಾಏಕಿ ತಲ್ವಾರ್ನಿಂದ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಶೋಭಾ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.