ಮಂಗಳೂರು: ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾರಕಿನಡಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಗೋಪಾಲಕೃಷ್ಣ (63) ಮತ್ತು ಅವರ ಪುತ್ರಿ ದಿವ್ಯಾಶ್ರೀ (32) ಮೃತಪಟ್ಟವರು.
ಇಂದು ಸಂಜೆ ತಂದೆ, ಮಗಳು ತೋಟಕ್ಕೆ ಹುಲ್ಲು ತರಲು ಹೋಗಿದ್ದಾಗ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ವಿದ್ಯುತ್ ಪ್ರವಹಿಸಿದೆ. ತಕ್ಷಣ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಬಂಟ್ವಾಳ ವೃತ್ತ ನಿರೀಕ್ಷಕ ಶರಣಗೌಡ, ಎಸ್ಐ ಸುಧಾಕರ ತೊನ್ಸೆ, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಭೇಟಿ ನೀಡಿ ಪರಿಶೀಲನೆ ನಡೆಸಿದರು.