ETV Bharat / city

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ.. ದೇವರ ಅಭವೃತೋತ್ಸವ ಸಂಪನ್ನ.. - ಸುಬ್ರಹ್ಮಣ್ಯದಲ್ಲಿ ಜಾತ್ರೆ

ದೇವರ ಜಳಕದ ಬಳಿಕ ಕುಮಾರಧಾರ ನದಿತೀರದ ಅವಭೃತಕಟ್ಟೆಯಲ್ಲಿ ವಿಶೇಷ ಕಟ್ಟೆಪೂಜೆ ನೆರವೇರಿಸಲಾಯಿತು. ನೆರೆದ ಭಕ್ತರ ನಡುವೆ ಕುಮಾರಧಾರಾ ನದಿಯಲ್ಲಿ ದೇಗುಲದ ಆನೆ ಯಶಸ್ವಿನಿ ಜಳಕ ಮಾಡಿ ಖುಷಿಪಟ್ಟಿತ್ತು..

Fest at Kukke Shri Subramanya Temple
ಸುಬ್ರಹ್ಮಣ್ಯದಲ್ಲಿ ಜಾತ್ರೆ
author img

By

Published : Dec 10, 2021, 6:46 PM IST

Updated : Dec 10, 2021, 7:12 PM IST

ಸುಬ್ರಹ್ಮಣ್ಯ (ದ.ಕನನ್ನಡ) : ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಕುಮಾರಧಾರ ನದಿಯಲ್ಲಿ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು.

ಕುಮಾರಧಾರಾ ನದಿಯ ಪವಿತ್ರ ತೀರ್ಥದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ ನಡೆಯಿತು. ದೇವಳದ ಪ್ರಧಾನ ಅರ್ಚಕರು ಅವಭೃತೋತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ.. ದೇವರ ಅಭವೃತೋತ್ಸವ ಸಂಪನ್ನ

ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ನಡೆಯಿತು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರನ್ನು ಪಲ್ಲಕ್ಕಿಯಲ್ಲಿ ರಥಬೀದಿಗೆ ತಂದು, ಬಂಡಿ ರಥದಲ್ಲಿ ಕುಮಾರಧಾರಾವರೆಗೆ ಅವಭೃತೋತ್ಸವದ ಸವಾರಿ ನಡೆಯಿತು. ಈ ನಡುವೆ ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.

ಬಳಿಕ ಕುಮಾರಧಾರ ನದಿಯ ಮತ್ಸ್ಯತೀರ್ಥದಲ್ಲಿ ಪುಷ್ಪಾಲಂಕೃತವಾಗಿ ಸಿಂಗರಿಸಲ್ಪಟ್ಟ ಎರಡು ದೋಣಿಗಳನ್ನು ಜೋಡಿಸಿ ಮಾಡಿದ ಸುಂದರ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ನಡೆಯಿತು. ಕುಮಾರಧಾರೆಯ ಜಳಕದಗುಂಡಿಯಲ್ಲಿ ಭಕ್ತರ ಸಾನಿಧ್ಯದಲ್ಲಿ ಪುರೋಹಿತರ ಮಂತ್ರ ಘೋಷದೊಂದಿಗೆ ಅವಭೃತೋತ್ಸವ ನಡೆಯಿತು.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಭ್ರಮದ ಪಂಚಮಿ, ಚಂಪಾಷಷ್ಠಿ ಉತ್ಸವ

ದೇವರ ಜಳಕದ ಬಳಿಕ ಕುಮಾರಧಾರ ನದಿತೀರದ ಅವಭೃತಕಟ್ಟೆಯಲ್ಲಿ ವಿಶೇಷ ಕಟ್ಟೆಪೂಜೆ ನೆರವೇರಿಸಲಾಯಿತು. ನೆರೆದ ಭಕ್ತರ ನಡುವೆ ಕುಮಾರಧಾರಾ ನದಿಯಲ್ಲಿ ದೇಗುಲದ ಆನೆ ಯಶಸ್ವಿನಿ ಜಳಕ ಮಾಡಿ ಖುಷಿಪಟ್ಟಿತ್ತು.

Last Updated : Dec 10, 2021, 7:12 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.