ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಕುರಿತಂತೆ ಇಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್ ಮತ್ತು ಪೊಲೀಸ್ ತಂಡ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭ ನಂಬರ್ ಪ್ಲೇಟ್ ನಿಯಮ ಉಲ್ಲಂಘನೆ ಮಾಡಿರುವ ವಾಹನಗಳಿಗೆ ದಂಡ ವಿಧಿಸಲಾಯಿತು.
ರಿಜಿಸ್ಟ್ರೇಷನ್ ಮಾಡದ, ನಂಬರ್ ಪ್ಲೇಟ್ ಗಳಿಲ್ಲದ ವಾಹನಗಳು ಸೇರಿದಂತೆ ನಿಯಮ ಉಲ್ಲಂಘನೆ ಮಾಡಿರುವ ಸಾಕಷ್ಟು ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ. ನಂಬರ್ ಪ್ಲೇಟ್ ನಿಯಮ ಉಲ್ಲಂಘನೆ ಮಾಡಿರುವ ವಾಹನಗಳಿಗೆ 500 ರೂ. ದಂಡ ವಿಧಿಸಲಾಗಿದೆ.
ಇದನ್ನೂ ಓದಿ: ಇಂದಿನಿಂದ ಅ.2ರವರೆಗೆ ಮಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಾಚರಣೆ
ನಿನ್ನೆಯಿಂದ ಈ ಕಾರ್ಯಾಚರಣೆ ಆರಂಭವಾಗಿದ್ದು, ಅಕ್ಟೋಬರ್ 2 ರವರೆಗೆ ನಡೆಯಲಿದೆ. ಒಂದೊಂದು ದಿನವೂ ವಿವಿಧ ಸಾರಿಗೆ ನಿಯಮ ಉಲ್ಲಂಘನೆಯ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಿದ್ದಾರೆ. ಇಂದು ನಂಬರ್ ಪ್ಲೇಟ್ನಲ್ಲಿನ ದೋಷದ ಕುರಿತಂತೆ ಕಾರ್ಯಾಚರಣೆ ನಡೆಯುತ್ತಿದೆ.