ಉಳ್ಳಾಲ (ದಕ್ಷಿಣಕನ್ನಡ): ಉಳ್ಳಾಲ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಮಾಂಸದ ಅಂಗಡಿಗಳಿಗೆ ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಲಾಗಿದ್ದು, ವರ್ತಕರಿಂದ ಆಕ್ರೋಶ ವ್ಯಕ್ತವಾಗಿದೆ.
ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿ ಉಳ್ಳಾಲದ ಭಜರಂಗದಳ-ವಿಹಿಂಪ ಇತ್ತೀಚೆಗೆ ಇವುಗಳ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು.
ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.