ಸುಳ್ಯ/ದಕ್ಷಿಣ ಕನ್ನಡ: ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಎನ್ಐಎಗೆ ಕೊಟ್ಟು ನಮ್ಮಲ್ಲಿರುವ ಉತ್ತಮ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಸಿಯುವಂತೆ ಮಾಡಿದೆ. ಎನ್ಐಎಗೆ ಈ ಹಿಂದೆ ಕೊಟ್ಟ ಯಾವುದೇ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಿಲ್ಲ. ಆದರೆ ಈ ಪ್ರಕರಣವನ್ನು ಎನ್ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇಂದು ಬೆಳಗೆ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹಾಗೂ ವಿಷ್ಣುನಗರ ಕಲೆಂಜದ ಮಹಮ್ಮದ್ ಮಸೂದ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಹೇಳುವುದು ಇಷ್ಟೇ. ಈ ಪ್ರಕರಣದ ತನಿಖೆ ಕಾಟಾಚಾರಕ್ಕೆ ಆಗಬಾರದು. ಈಗಾಗಲೇ ನಮ್ಮಲ್ಲಿ ಸಮರ್ಪಕವಾಗಿ ತನಿಖೆ ಮಾಡುವ ಅಧಿಕಾರಿಗಳನ್ನು ಬದಿಗೊತ್ತಿ ತನಿಖೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಕುಟುಂಬಗಳು ನ್ಯಾಯದಿಂದ ವಂಚಿತರಾಗಬಾರದು ಎಂದರು.
ಈಗಾಗಲೇ ಈ ಎರಡು ಕುಟುಂಬಗಳಿಗೆ ನಮ್ಮ ಕಡೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ನೀಡಿದ್ದೇವೆ. ಯಾವುದೇ ಸಮಸ್ಯೆ ಎದುರಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ದೂರವಾಣಿ ಸಂಖ್ಯೆಯನ್ನೂ ನೀಡಿರುವುದಾಗಿ ಕುಮಾರಸ್ವಾಮಿ ಹೇಳಿದ್ರು.
ಇದನ್ನೂ ಓದಿ: ಗೃಹ ಸಚಿವ ನಿವಾಸ ಮುತ್ತಿಗೆ: ಪ್ರವೀಣ್ ಕೊಲೆ ಪ್ರಕರಣದ ಪ್ರಗತಿ ಬಗ್ಗೆ ಡಿಜಿಪಿ ಸೂದ್ಗೆ ಸಿಎಂ ತರಾಟೆ