ETV Bharat / city

ಪ್ರವೀಣ್ ಪತ್ನಿಗೆ ಶಕುಂತಲಾ ಶೆಟ್ಟಿ ಸಾಂತ್ವನ: ಮಧ್ಯಾಹ್ನ ವಿಜಯೇಂದ್ರ ಭೇಟಿ ಸಾಧ್ಯತೆ

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಕೊಲೆಗೀಡಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂದು ಮಧ್ಯಾಹ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

Former MLA Shakuntala Shetty
ಮೃತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ
author img

By

Published : Jul 28, 2022, 12:18 PM IST

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿಗೆ ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ, ಕಡಬ, ಸುಳ್ಯದಲ್ಲಿಂದು ಕೂಡ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಆರೋಪಿಗಳ ಬಂಧನವಾಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರವೀಣ್ ಪತ್ನಿಗೆ ಸಾಂತ್ವನ ಹೇಳಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ

ಬಿ.ವೈ.ವಿಜಯೇಂದ್ರ ಭೇಟಿ?: ಮಧ್ಯಾಹ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಪ್ರವೀಣ್ ಮನೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿರುವ ವಿಜಯೇಂದ್ರ, ಮಧ್ಯಾಹ್ನದ ವೇಳೆಗೆ ಬೆಳ್ಳಾರೆ, ನೆಟ್ಟಾರು ತಲುಪಿ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವೀಣ್​ ಕೊಲೆ ಪ್ರಕರಣ: ಪಿಎಫ್​ಐ, ಎಸ್​​ಡಿಪಿಐ ಮೇಲೆ ಅನುಮಾನವಿದೆ ಎಂದ ಗೃಹ ಸಚಿವರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.