ETV Bharat / city

ಮಂಗಳಾದೇವಿ ದೇವಳದಲ್ಲಿ ನಾಲ್ಕು‌ ಜೋಡಿ ಮದುವೆ ಪ್ರಕರಣ: ಅಧಿಕಾರಿಗಳು, ಆಡಳಿತ ಸಮಿತಿ ವಿರುದ್ಧ ಕೇಸ್​

ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮತ್ತು ಮನಪಾ ಕಂದಾಯ ಇಲಾಖೆಯ ಉಪ ಆಯುಕ್ತ ಬಿನೋಯ್ ಸೇರಿದಂತೆ ಅಧಿಕಾರಿಗಳು ದಾಳಿ ನಡೆಸಿ ಮದುವೆಯನ್ನು ನಿಲ್ಲಿಸಿದ್ದರು.

Mangaladevi Devalaya case
ಮಂಗಳಾದೇವಿ ದೇವಳ
author img

By

Published : Jun 20, 2021, 10:51 PM IST

ಮಂಗಳೂರು: ನಗರದ ಮಂಗಳಾದೇವಿ ದೇವಳದಲ್ಲಿ ಲಾಕ್​​ಡೌನ್ ನಿಯಮ‌ ಉಲ್ಲಂಘಿಸಿ ನಡೆದಿರುವ ನಾಲ್ಕು ಜೋಡಿಯ ಮದುವೆಗೆ ಸಂಬಂಧಿಸಿದಂತೆ, ಅಧಿಕಾರಿಗಳು ಹಾಗೂ ದೇವಳದ ಆಡಳಿತ ಸಮಿತಿಯ ವಿರುದ್ಧವೂ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಮಂಗಳಾದೇವಿ ದೇವಳ

ಓದಿ: ದೇವರ ಹೆಸರಲ್ಲಿ ಅಪ್ರಾಪ್ತೆಗೆ ತಾಳಿಕಟ್ಟಿದ ಚರ್ಚ್​​​ 'ಫಾದರ್': ಪ್ರಕರಣ ದಾಖಲು..!

ಭಾನುವಾರ ಬೆಳಗ್ಗೆ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮತ್ತು ಮನಪಾ ಕಂದಾಯ ಇಲಾಖೆಯ ಉಪ ಆಯುಕ್ತ ಬಿನೋಯ್ ಸೇರಿದಂತೆ ಅಧಿಕಾರಿಗಳು ದಾಳಿ ನಡೆಸಿ ಮದುವೆಯನ್ನು ನಿಲ್ಲಿಸಿದ್ದರು.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಒಂದೇ ಕಡೆಯಲ್ಲಿ‌ ನಾಲ್ಕು ಮದುವೆ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಮನಪಾ ಆರೋಗ್ಯ ಅಧಿಕಾರಿಗಳು ಹಾಗೂ ದೇವಾಲಯದ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ ಮದುವೆ ಕಾರ್ಯಕ್ರಮ ಆಯೋಜಿಸಿರುವ ಕುಟುಂಬಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.