ಮಂಗಳೂರು: ನಗರದಲ್ಲಿ ಮತ್ತೆ ರೌಡಿಗಳು ತಲವಾರು ಝಳಪಿಸಿದ್ದಾರೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ನಡೆದಿದೆ. ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿರುವ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಳಕೆ ಗ್ಯಾಂಗ್ಗೆ ಸೇರಿದ ಶ್ರವಣ್ ಗ್ಯಾಂಗ್ ವಾರ್ನಿಂದ ಗಂಭೀರವಾಗಿ ಗಾಯಗೊಂಡ ಯುವಕ. 2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದೆ. ಗಾಯಾಳು ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರಂಭದಲ್ಲಿ ಇದೊಂದು ಕೊಲೆಯತ್ನ ಎಂದು ಭಾವಿಸಲಾಗಿತ್ತು. ಆದರೆ ಈಗ ಗ್ಯಾಂಗ್ ವಾರ್ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.
ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ಹುಟ್ಟಿನಿಂದಲೇ 9 ವರ್ಷದ ಬಾಲಕಿ ಹೊಟ್ಟೆಯಲ್ಲಿ ಮಗು.. ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು..)