ದಕ್ಷಿಣನ ಕನ್ನಡ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತಡ್ಕದಲ್ಲಿ ಗ್ಯಾಸ್ಟ್ಯಾಂಕರ್ವೊಂದು ನಿಯಂತ್ರಣ ತಪ್ಪಿ ಬಿದ್ದು, ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬರುತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಗೊಂಡ ಚಾಲಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಸದ್ಯ, ಟ್ಯಾಂಕರ್ನ್ನ ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಮತ್ತು ಉಪ್ಪಿನಂಗಡಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.