ETV Bharat / city

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 15 ವರ್ಷ ಕಠಿಣ ಸಜೆ, ದಂಡ

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿ.ಜೆ.ಜೇಕಬ್ 2015ರ ಫೆಬ್ರವರಿಯಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಬಲಾತ್ಕಾರವಾಗಿ ತಡೆದು ನಿಲ್ಲಿಸಿ ಅತ್ಯಾಚಾರವೆಸಗಿದ್ದನು.

Mangaluru court
Mangaluru court
author img

By

Published : Oct 27, 2021, 11:58 PM IST

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯ ಮೇಲಿನ ಅಪರಾಧ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 15 ವರ್ಷ ಕಠಿಣ ಸಜೆ ವಿಧಿಸಿ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ತೀರ್ಪು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿ.ಜೆ.ಜೇಕಬ್ 2015ರ ಫೆಬ್ರವರಿಯಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಬಲಾತ್ಕಾರವಾಗಿ ತಡೆದು ನಿಲ್ಲಿಸಿ ಅತ್ಯಾಚಾರವೆಸಗಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗೂ ಹೇಳಿದಂತೆ ಬೆದರಿಕೆ ಒಡ್ಡಿದ್ದನು. ಆ ಬಳಿಕವೂ ಬಾಲಕಿ ಶಾಲೆಯಿಂದ ಮರಳುತ್ತಿದ್ದ ಸಂದರ್ಭ ಮತ್ತೊಮ್ಮೆ ತಡೆದು ರಬ್ಬರ್ ತೋಟಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಡಿಎನ್‌ಎ ಪರೀಕ್ಷೆ ನಡೆಸಿದ್ದು, ಅದರಲ್ಲಿ ಬಾಲಕಿಯ ಗರ್ಭಕ್ಕೆ ಪಿ.ಜೆ.ಜೇಕಬ್ ಕಾರಣ ಎಂದು ದೃಢಪಟ್ಟಿತ್ತು. ಈ ಬಗ್ಗೆ ಪುತ್ತೂರು ಎಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯದ ನ್ಯಾಯಧೀಶೆ ವಾದ-ಪ್ರತಿವಾದವನ್ನು ಆಲಿಸಿ ನ್ಯಾಯಾಧೀಶರು ಸಾವಿತ್ರಿ ವಿ. ಭಟ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿರಿ: ಮಧುಗಿರಿ ಕೋರ್ಟ್​​ನಿಂದ ಜಾಮೀನು ರಹಿತ ವಾರಂಟ್ : ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವರವರ ರಾವ್

ಅಪರಾಧಿಗೆ ಅತ್ಯಾಚಾರ ಎಸಗಿದ್ದಕ್ಕೆ 6 ವರ್ಷ ಕಠಿಣ ಸಜೆ, 1 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಕಠಿಣ ಸಜೆ, ಬಲವಂತವಾಗಿ ತಡೆದು ನಿಲ್ಲಿಸಿರುವುದಕ್ಕೆ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 15 ದಿನ ಸಜೆ, ಕೊಲೆ ಬೆದರಿಕೆ ಹಾಕಿರುವುದಕ್ಕೆ 6 ತಿಂಗಳು ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ತಿಂಗಳು ಹೆಚ್ಚುವರಿ ಕಠಿಣ ಸಜೆ ಹಾಗೂ ಪೋಕ್ಸೊ ಕಾಯಿದೆಯಡಿ 15 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 1 ವರ್ಷ ಕಠಿಣ ಸಜೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ 2 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.ದಂಡದ ಮೊತ್ತದಲ್ಲಿ 2 ಲಕ್ಷ ರೂ. ಹಾಗೂ ಸರಕಾರದಿಂದ 1 ಲಕ್ಷ ರೂ. ಪರಿಹಾರ ಧನವನ್ನು ನೊಂದ ಬಾಲಕಿಗೆ ನೀಡುವಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.