ಮಂಗಳೂರು: ಮಂಗಳೂರಿನ ವಾಮಂಜೂರಿನ ಸೈಂಟ್ ರೇಮೇಂಡ್ಸ್ ಪಿಯು ಕಾಲೇಜಿನಲ್ಲಿ ಹಿಜಾಬ್ ವಿವಾದದಿಂದ ಗೊಂದಲ ಮುಂದುವರೆದಿದ್ದು, ಎರಡನೇ ದಿನವೂ 32 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ವಾಪಸಾಗಿದ್ದಾರೆ.
ಸೈಂಟ್ ರೇಮೇಂಡ್ಸ್ ಪಿಯು ಕಾಲೇಜಿನಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಆಗಮಿಸಿದ್ದರು. ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಿದರೂ ಹಿಜಾಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿದ್ದರು. ನಿನ್ನೆ ವಿದ್ಯಾರ್ಥಿನಿಯರು ಹೊರಬಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇಂದು ಕೂಡ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ಮೂವರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆದಿದ್ದಾರೆ. ಆದರೆ 32 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ವಾಪಸಾಗಿದ್ದಾರೆ.
ಇದನ್ನೂ ಓದಿ: ಹಿಜಾಬ್ ತೀರ್ಪು ವಿರೋಧಿಸಿ ಪರೀಕ್ಷೆ ಬಹಿಷ್ಕಾರ: ಮರು ಪರೀಕ್ಷೆ ಸಾಧ್ಯವಿಲ್ಲ- ಶಿಕ್ಷಣ ಸಚಿವ ಬಿ.ಸಿ.ನಾಗೇಶ್