ಮಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ನಗರದ ಕಾರ್ ಸ್ಟ್ರೀಟ್ನಲ್ಲಿರುವ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆಯನ್ನು ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದನ್ವಯ ಸದ್ಯ ಕಾಲೇಜಿನಲ್ಲಿ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಲ್ಲದೇ, ಎಲ್ಲಾ ತರಗತಿಗಳನ್ನು ಆನ್ಲೈನ್ ಮೂಲಕವೇ ಮಾಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಲಾಗಿದೆ.
3 ದಿನಗಳಿಂದ ಹಿಜಾಬ್ ಧರಿಸಿ ತರಗತಿಗೆ ಬರುತ್ತಿರುವ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ತಡೆಯಲಾಗಿದೆ. ಈ ವೇಳೆ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆದು ದ್ವಿತೀಯ ಪದವಿ ವಿದ್ಯಾರ್ಥಿನಿಯೊಬ್ಬಳು ಬಂದರ್ ಠಾಣೆಯಲ್ಲಿ ದೂರು ನೀಡಿದ್ದಳು. ಇದರಿಂದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜಿನ ವ್ಯವಸ್ಥಾಪಕ ಸಮಿತಿಯು ವಿದ್ಯಾರ್ಥಿಗಳಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಿದೆ.
ಓದಿ: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ