ಮಂಗಳೂರು: ಗಾಂಧೀಜಿಯನ್ನು ಬಿಡ್ಲಿಲ್ಲ , ನಿಮ್ಮನ್ನು ಬಿಡ್ತೀವಾ? ಎಂದು ಸಿಎಂಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತರಾಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಹೇಳಿಕೆ ನೀಡಿದ ಬೆನ್ನಲ್ಲೇ ಧರ್ಮೇಂದ್ರ ಜೊತೆಗೆ ರಾಜೇಶ್ ಪವಿತ್ರನ್, ಪ್ರೇಮ್ ಶೆಟ್ಟಿ ಪೊಳಲಿ ಹಾಗೂ ಸಂದೀಪ್ ಶೆಟ್ಟಿ ಅವರನ್ನು ಬಂಧಿಸಲಾಗಿತ್ತು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಧರ್ಮೇಂದ್ರಗೆ ಸೆ.22ರವರೆಗೆ ಎರಡು ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಉಳಿದ ಮೂರು ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮೈಸೂರು ದೇವಸ್ಥಾನ ಧ್ವಂಸ ಘಟನೆಗೆ ಸಂಬಂಧಿಸಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಧರ್ಮೇಂದ್ರ ಅವರು ಸಿಎಂ ವಿರುದ್ಧ ಕೊಲೆ ಬೆದರಿಕೆಯ ಮಾತನಾಡಿದ್ದರು ಎಂದು ಒಟ್ಟು ಎಂಟು ಮಂದಿ ವಿರುದ್ಧ ಅಖಿಲ ಭಾರತ ಹಿಂದೂ ಮಹಾಸಭಾದ ಮತ್ತೊಂದು ಗುಂಪಿನ ಅಧ್ಯಕ್ಷ ಡಾ.ಲೋಹಿತ್ ಕುಮಾರ್ ಸುವರ್ಣ ಬರ್ಕೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಧರ್ಮೇಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದರಿಂದಲೇ ನಾನು ಎರಡು ಬಾರಿ ವಿಧಾನಸಭೆಗೆ ಬಂದಿದ್ದೇನೆ: ಜೆಡಿಎಸ್ ಶಾಸಕ ಶಿವಲಿಂಗೇಗೌಡ