ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಡಿ ಮಳೆಯಾಗುತ್ತಿದ್ದು ಶಾಲಾ-ಕಾಲೇಜಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ನಿನ್ನೆ ಬೆಳ್ತಂಗಡಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಡಿಪ್ಲೊಮಾ ಹಾಗು ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉತ್ತರಕನ್ನಡದಲ್ಲೂ ವ್ಯಾಪಕ ಮಳೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಕರಾವಳಿಯಲ್ಲಿ ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ