ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮುರುಡೇಶ್ವರದ ಮುಹಮ್ಮದ್ ಅವಾನ್ ಬಂಧಿತ ಆರೋಪಿ. ಈತ ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ. ಈತನನ್ನು ತಪಾಸಣೆ ನಡೆಸಿದಾಗ ಟ್ರಾಲಿ ಬ್ಯಾಗ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಓದಿ: ವಿದ್ಯಾರ್ಥಿ ಕೈ ಮುರಿದ ಶಿಕ್ಷಕಿ ಬಂಧಿಸಬೇಡ: ಕೇರಳ ಹೈಕೋರ್ಟ್ ಸೂಚನೆ
ಈತನಿಂದ 16,52,000 ರೂಪಾಯಿ ಮೌಲ್ಯದ 350 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.