ಮಂಗಳೂರು: ದುಬೈಯಿಂದ ಬರುತ್ತಿದ್ದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 632 ಗ್ರಾಂ 23.5 ಕ್ಯಾರೆಟ್ ಶುದ್ಧ ಚಿನ್ನವನ್ನು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ ಈ ಪ್ರಯಾಣಿಕ ತನ್ನ ಗುದದ್ವಾರದಲ್ಲಿ ಪೇಸ್ಟ್ ರೂಪದಲ್ಲಿದ್ದ 632 ಗ್ರಾಂ 23.5 ಕ್ಯಾರೆಟ್ ಶುದ್ಧ ಚಿನ್ನವನ್ನು ಸಾಗಿಸುತ್ತಿದ್ದ. ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈ ವಿಚಾರ ಗೊತ್ತಾಗಿದೆ. ಇನ್ನು ಈ ಶುದ್ಧ ಚಿನ್ನದ ಒಟ್ಟು ಮೌಲ್ಯ 19.49 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.