ಮಂಗಳೂರು/ಉಡುಪಿ: ನಗರದ ಲಾಲ್ಬಾಗ್ನಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಚಯ ಉದ್ಘಾಟನೆಗೊಂಡಿತು.
ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಮಂಗಳೂರು ನಗರದ ಲಾಲ್ಬಾಗ್ನಲ್ಲಿ ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಚಯವನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅಬ್ದುಲ್ ನಜೀರ್ ಉದ್ಘಾಟಿಸಿದರು.
ಈ ಸಂದರ್ಭ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶ ಜಸ್ಟೀಸ್ ಎ ಎಸ್ ಓಕ್, ದಕ್ಷಿಣಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ, ಹೈಕೋರ್ಟ್ನ ಜಡ್ಜ್ ಹಾಗೂ ದ.ಕ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ಜಸ್ಟೀಸ್ ವೀರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ ನ್ಯಾಯಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ :
ಉಡುಪಿ ಜಿಲ್ಲೆಯ ಕುಂದಾಪುರ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯದ ನೂತನ ಕಟ್ಟಡಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಸಮಾಜದ ಉತ್ತಮ ಸ್ವಾಸ್ಥ್ಯಕ್ಕಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತುರ್ತು ಇತ್ಯರ್ಥಪಡಿಸುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ ಎಂದರು. ಈ ಸಂದರ್ಭ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ಬಿ ಎ ಪಟೇಲ್, ಬಿ. ವೀರಪ್ಪ, ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್, ರಿಜಿಸ್ಟ್ರಾರ್ ಜನರಲ್ ಕೆ ಎಂ ನಟರಾಜ್, ಉಡುಪಿ ಜಿಲ್ಲಾ ನ್ಯಾಯಾಧೀಶ ಸಿ ಎಂ ಜೋಶಿ, ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ನಿರಂಜನ್ ಹೆಗ್ಡೆ ಉಪಸ್ಥಿತರಿದ್ದರು.