ETV Bharat / city

ಜೆಸಿಬಿ, ಹಿಟಾಚಿ ಕಳವು ಪ್ರಕರಣ: ಆರೋಪಿ ಬಂಧನ -

ಜುಲೈ 8 ರಂದು ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ನಿಲ್ಲಿಸಿದ್ದ ಜೆಸಿಬಿ, ಹಿಟಾಚಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಜೆಸಿಬಿ,ಹಿಟಾಚಿ ಕಳವು ಪ್ರಕರಣ:ಆರೋಪಿ ಬಂಧನ
author img

By

Published : Jul 10, 2019, 10:06 AM IST

ಮಂಗಳೂರು: ತಾಲೂಕಿನ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ನಿಲ್ಲಿಸಿದ್ದ ಜೆಸಿಬಿ, ಹಿಟಾಚಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಮುತ್ತೂರು ನಿವಾಸಿ ಅಬ್ದುಲ್ ರೆಹಮಾನ್ (35) ಬಂಧಿತ ಆರೋಪಿ. ಮಂಗಳೂರಿನ ದಂಬೇಲ್ ನಿವಾಸಿ ಶರತ್ ಕೆ. ಚಂದ್ರ ಎಂಬುವರು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ಇಟ್ಟಿದ್ದ ಜೆಸಿಬಿ ಮತ್ತು ಟಾಟಾ ಹಿಟಾಚಿ ಜುಲೈ 8 ರಂದು ಕಳ್ಳತನ ವಾಗಿದ್ದವು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಂದು ಆರೋಪಿಯನ್ನ ಬಂಧಿಸಲಾಗಿದ್ದು, ಆತ ಕಳವು ಮಾಡಿದ ಜೆಸಿಬಿ ಮತ್ತು ಹಿಟಾಚಿ ಯಂತ್ರದ ತುಂಡರಿಸಿದ ಭಾಗಗಳು, ಮಷಿನ್‌ಗಳ ಭಾಗಗಳು ಹಾಗೂ ಇವುಗಳನ್ನ ಸಾಗಿಸಲು ಉಪಯೋಗಿಸಿದ ಲಾರಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಕಳ್ಳತನವಾದ ಜೆಸಿಬಿ, ಹಿಟಾಚಿಯ ಒಟ್ಟು ಮೌಲ್ಯ 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Intro:ಮಂಗಳೂರು: ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ನಿಲ್ಲಿಸಿದ್ದ ಜೆಸಿಬಿ, ಹಿಟಾಚಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.Body:ಕುಪ್ಪೆಪದವು ಬಸ್ ನಿಲ್ದಾಣದ ಬಳಿ ಈತನನ್ನು ಬಂಧಿಸಲಾಗಿದ್ದು ಮಂಗಳೂರು ತಾಲೂಕಿನ ಮುತ್ತೂರು ನಿವಾಸಿ ಅಬ್ದುಲ್ ರಹಿಮಾನ್ (35) ಬಂಧಿತ ಆರೋಪಿ.

ಮಂಗಳೂರಿನ ದಂಬೇಲ್ ನಿವಾಸಿ ಶರತ್ ಕೆ. ಚಂದ್ರ ಎಂಬವರ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ಇಟ್ಟಿದ್ದ ಜೆಸಿಬಿ ಮತ್ತು ಟಾಟಾ ಹಿಟಾಚಿ ಮಷಿನ್‌ಗಳು ಚಾಲನಾ ಸ್ಥಿತಿಯಲ್ಲಿರಲಿಲ್ಲ. ಮೇ 19ರಂದು ಸಂಜೆ ಸುಮಾರು 5 ಗಂಟೆಗೆ ಯಂತ್ರಗಳನ್ನು ನೋಡಿದ್ದು, ಜುಲೈ 8ರಂದು ಬೆಳಗ್ಗೆ 9 ಗಂಟೆಗೆ ಹೋಗಿ ನೋಡಿದಾಗ ಅಲ್ಲಿಟ್ಟಿದ್ದ ಜೆಸಿಬಿ ಮತ್ತು ಟಾಟಾ ಹಿಟಾಚಿ ಕಳವಾಗಿದ್ದವು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯಿಂದ ಕಳವು ಮಾಡಿದ ಜೆಸಿಬಿ ಮತ್ತು ಹಿಟಾಚಿ ಯಂತ್ರದ ತುಂಡರಿಸಿದ ಭಾಗಗಳನ್ನು ಮತ್ತು ಮಷಿನ್‌ಗಳ ಭಾಗಗಳನ್ನು ಸಾಗಿಸಲು ಉಪಯೋಗಿಸಿದ ಲಾರಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಏಳು ಲಕ್ಷ ರೂ. ವೌಲ್ಯದ ಜೆಸಿಬಿ ಮತ್ತು ಹಿಟಾಚಿ ಯಂತ್ರದ ತುಂಡರಿಸಿದ ಭಾಗಗಳು, ಎರಡು ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ವೌಲ್ಯ 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Reporter- vinodpudu

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.