ಕಡಬ: ತಾಲೂಕಿನ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸೇತುವೆ ಸಮೀಪ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆಗೆ ಕಡಬ ಠಾಣೆ ಪೊಲೀಸರು ಕಡಿವಾಣ ಹಾಕಿದ್ದಾರೆ.
ಕಳೆದ ಒಂದು ತಿಂಗಳಿಂದ ನಿರಂತರವಾಗಿ ಮರಳು ದಂಧೆಕೋರರು ಅನುಮತಿ ರಹಿತವಾಗಿ ಮರಳು ಸಾಗಣೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಸ್ಥಳೀಯ ಗ್ರಾ.ಪಂ., ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ತಡೆಯಲು ವಿಫಲರಾಗಿದ್ದು, ಪೊಲೀಸರ ಹೆಸರನ್ನೇ ದುರ್ಬಳಕೆ ಮಾಡಿಕೊಂಡು ಪಿಕಪ್, ಲಾರಿಗಳಲ್ಲಿ ನಿರಂತರವಾಗಿ ಮರಳು ಸಾಗಣೆ ಮಾಡುತ್ತಿದ್ದರು ಎನ್ನಲಾಗಿತ್ತು.
ಅಕ್ರಮ ಮರಳು ಸಾಗಂಎ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ದೂರು ದಾಖಲಾದ ಹಿನ್ನೆಲೆಯಲ್ಲಿ ಕಡಬ ಠಾಣೆ ಎಸ್.ಐ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ ತಂಡ ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅನಧಿಕೃತ ರಸ್ತೆಗಳನ್ನು ಜೆಸಿಬಿ ಮೂಲಕ ಮುಚ್ಚಿಸಿದ್ದಾರೆ. ಜೊತೆಗೆ ಎಲ್ಲ ಅಕ್ರಮ ಮರಳು ನಿಕ್ಷೇಪಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿರುವುದಾಗಿ ಎಸ್ಐ ತಿಳಿಸಿದ್ದಾರೆ.