ಮಂಗಳೂರು: ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಅಗಲಿಕೆ ದುಃಖ ತಂದಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಂಬನಿ ಮಿಡಿದರು.
ನಗರದಲ್ಲಿ ಮಾತನಾಡಿದ ಅವರು, ಧನಂಜಯ್ ಕುಮಾರ್ ಸಂದಿಗ್ಧ ಸಮಯದಲ್ಲಿ ವೈಚಾರಿಕ ವಿಚಾರದ ಮೂಲಕ ಬಿಜೆಪಿಗೆ ಬದ್ಧತೆ ತೋರಿಸಿದ್ದರು. ಲಕ್ಷಾಂತರ ಕಾರ್ಯಕರ್ತರು ಬಿಜೆಪಿ ಜೊತೆಗೆ ಕೈಜೋಡಿಸಲು ಅವರು ಕಾರಣಿಭೂತರಾಗಿದ್ದರು ಎಂದು ಸ್ಮರಿಸಿದರು.
ಇನ್ನು ಧನಂಜಯ್ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ದೇವರು ಕೊಡಲಿ ಎಂದು ಪ್ರಾರ್ಥಿಸುವುದಾಗಿ ಪೂಜಾರಿ ಹೇಳಿದರು.