ETV Bharat / city

ದ.ಕ ಜಿಲ್ಲಾ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ - ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ನ ಮಂಜುನಾಥ ಭಂಡಾರಿ ವಿಜಯ

Karnataka council election result-2021: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್​ನ ಮಂಜುನಾಥ ಭಂಡಾರಿ ಅವರು ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

Dakshina Kannada MLC election
ಕೋಟ ಶ್ರೀನಿವಾಸ ಪೂಜಾರಿ -ಮಂಜುನಾಥ ಭಂಡಾರಿ
author img

By

Published : Dec 14, 2021, 1:05 PM IST

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು 5955 ಮತಗಳು ಸಿಂಧು ಮತಗಳಾಗಿದ್ದು ಇದರ ಪ್ರಕಾರ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲ್ಲಲು 1,986 ಮತಗಳು ಬೇಕಿದ್ದವು‌. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು 3,672 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 2,079 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯ ಮತದಲ್ಲೇ ವಿಜಯಿಯಾಗಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಪರಿಷತ್​ ಫಲಿತಾಂಶ : ಬಿಜೆಪಿಯ ಗಣಪತಿ ಉಳ್ವೇಕರ್​ಗೆ ಗೆಲುವು

ಚಲಾವಣೆಯಾದ ಮತಗಳಲ್ಲಿ 56 ಮತಗಳು ಅಸಿಂಧುವಾಗಿದ್ದವು. ಇನ್ನೋರ್ವ ಅಭ್ಯರ್ಥಿ ಎಸ್​​ಡಿಪಿಐನ ಶಾಫಿ ಬೆಳ್ಳಾರೆ 204 ಮತಗಳನ್ನು ಪಡೆದಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.