ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ತಾಯಿ ಮತ್ತು ಮಗನಲ್ಲಿ ಕೋವಿಡ್-19 ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಕುಲಶೇಖರ ಶಕ್ತಿನಗರದ 80 ವರ್ಷದ ಮಹಿಳೆ ಮತ್ತು ಅವರ ಪುತ್ರ 45 ವರ್ಷದ ವ್ಯಕ್ತಿಗೆ ಇಂದು ಕೊರೊನಾ ದೃಢಪಟ್ಟಿದೆ.
ಇತ್ತೀಚೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾ ಪಾಸಿಟಿವ್ನಿಂದ ಮೃತಪಟ್ಟ ಮಹಿಳೆ ಸಂಪರ್ಕದಿಂದ ಸೋಂಕು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟ 21 ಜನರ ಪೈಕಿ 12 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.