ಮಂಗಳೂರು: ಕೊರೊನಾ ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡಿದ 154 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ದ.ಕ ಜಿಲ್ಲಾದ್ಯಂತ ದಿನಬಳಕೆ ವಸ್ತುಗಳ ಖರೀದಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಜಿಲ್ಲಾಡಳಿತ ಕಾಲಾವಕಾಶ ನೀಡಿತ್ತು. ಅಲ್ಲದೇ ಮಧ್ಯಾಹ್ನ 12 ಗಂಟೆಯ ಬಳಿಕ ಅನಗತ್ಯವಾಗಿ ರಸ್ತೆಗೆ ಇಳಿಯುವವರ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಆದೇಶ ನೀಡಿತ್ತು.
ಆದ್ದರಿಂದ ಮಧ್ಯಾಹ್ನ 12ರ ಬಳಿಕವೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆಗಿಳಿದಿದ್ದ ವಾಹನಗಳನ್ನು ಜಪ್ತಿ ಮಾಡುವಂತೆ ಪೊಲೀಸ್ ಕಮೀಷನರ್ ಡಾ. ಪಿ.ಎಸ್.ಹರ್ಷ ಅವರ ಆದೇಶದಂತೆ ಕಾನೂನು ಉಲ್ಲಂಘನೆ ಮಾಡಿರುವ 154 ವಾಹನಗಳನ್ನು ಜಪ್ತಿ ಮಾಡಲಾಗಿದೆ.