ಬಂಟ್ವಾಳ: ಜನಪ್ರಿಯತೆಗೋಸ್ಕರ ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೆ ಗಡಿ ವಿಚಾರವನ್ನು ತೆಗೆಯುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಉದ್ಧವ್ ಠಾಕ್ರೆ ವಿರುದ್ಧ ಕಿಡಿಕಾರಿದರು.
ಬಂಟ್ವಾಳದಲ್ಲಿ ಇಂದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಆಗಮಿಸಿದ ಸಂದರ್ಭ ಮಹಾರಾಷ್ಟ್ರ ಮುಖ್ಯಮಂತ್ರಿ ಗಡಿ ಕ್ಯಾತೆ ವಿಚಾರದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಜನ್ ವರದಿ ಬಳಿಕವೂ ಹುಚ್ಚು ಹೇಳಿಕೆ ಕೊಡುತ್ತಿರುವ ಅವರನ್ನು ಹುಚ್ಚರು ಅಂತ ಕರಿಬೇಕಾಗುತ್ತೆ. ಯಾವ ವ್ಯಕ್ತಿಯ ಜನಪ್ರಿಯತೆ ಕಡಿಮೆಯಾಗುತ್ತದೋ ಆಗ ಆತ ಯಾರು ಬಲಿಷ್ಠನಾಗಿರುತ್ತಾನೋ ಅವನಿಗೆ ಬೈಯುತ್ತಾನೆ. ಮಹಾರಾಷ್ಟ್ರ ಸಿಎಂ ಪಾಪ್ಯುಲಾರಿಟಿ ಕಡಿಮೆಯಾಗುತ್ತಿದೆ. ಕರ್ನಾಟಕದ ಭೂಮಿ ಬಗ್ಗೆ ಮಾತನಾಡಿದರೆ ಮರಾಠಿಗರು ತನ್ನ ಪರವಾಗಿ ಇರುತ್ತಾರೆ ಎನ್ನುವ ಭ್ರಮೆಯಲ್ಲಿ ಅವರಿದ್ದಾರೆ ಹೇಳಿದರು.
ಓದಿ-ವಿಕ್ಟೋರಿಯಾದಿಂದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ಗೆ ಚಿನ್ನಮ್ಮ ಶಿಫ್ಟ್..
ಬಸವರಾಜ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಕೆಂಡಾಮಂಡಲವಾದ ಈಶ್ವರಪ್ಪ, ಅದನ್ನು ಬಿಟ್ಟು ಬೇರೆ ಏನಾದ್ರು ಕೇಳಿ ಉತ್ತರಿಸುತ್ತೇನೆ. ಆ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದರು.
ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಹಿತ ನಾವೆಲ್ಲರೂ ಇವತ್ತು ಮೀಟಿಂಗ್ ಮಾಡಿದ್ದೇವೆ. ಹಾಗೆಂದು ಅದಕ್ಕೆ ಬೇರೆ ಅರ್ಥ ಕಲ್ಪಿಸಲಾಗುತ್ತದೆಯೇ ಎಂದು ಪ್ರಶ್ನಿಸಿದ ಈಶ್ವರಪ್ಪ, ಬಿಜೆಪಿಯ ಶಾಸಕರು ಪ್ರತ್ಯೇಕ ಸಭೆ ನಡೆಸುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಲ್ಲ. ಬಿಜೆಪಿಯಲ್ಲಿ ಮೂಲ ಬಿಜೆಪಿ, ವಲಸೆ ಬಿಜೆಪಿ ಎಂದಿಲ್ಲ. ಅವೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದರು.