ETV Bharat / city

ಮಳಲಿ ಮಸೀದಿ ವಿವಾದ.. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಬಿಡುವುದಿಲ್ಲ: ಎಡಿಜಿಪಿ ಅಲೋಕ್ ಕುಮಾರ್ - ADGP Alok Kumar Talk

ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಮಳಲಿ ಮಸೀದಿ ವಿವಾದದ ಕುರಿತು ಮಾತನಾಡಿದ್ದಾರೆ.

ADGP Alok Kumar and Police Commissioner N.Shashikumar
ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಪೊಲೀಸ್​ ಕಮಿಷನರ್​ ಎನ್​.ಶಶಿಕುಮಾರ್​
author img

By

Published : May 26, 2022, 1:07 PM IST

ಮಂಗಳೂರು: ಮಳಲಿ ಮಸೀದಿ ನವೀಕರಣ ಸಂದರ್ಭದಲ್ಲಿ ದೇಗುಲ ಪತ್ತೆಯಾದ ಬಳಿಕ ಉಂಟಾಗಿರುವ ಗೊಂದಲಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಅವರು, ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳಲಿ ಮಸೀದಿ ವಿಚಾರ ಈಗ ನ್ಯಾಯಾಲಯದಲ್ಲಿದೆ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯವು ಆದೇಶಿಸಿದೆ. ಆ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಾನೂನು ಕ್ರಮ ವಹಿಸಲಾಗಿದೆ ಎಂದರು.

ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಗಳೂರು ಸೂಕ್ಷ್ಮ ಪ್ರದೇಶವಾಗಿದ್ದು, ಒಂದು ವರ್ಷದಲ್ಲಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸುವುದು ಅತೀ ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳ ಅಪರಾಧಗಳು ಹೆಚ್ಚಾಗುತ್ತಿದ್ದು, ಮಂಗಳೂರು ಪೊಲೀಸರು ಅಗತ್ಯ ಕ್ರಮ ವಹಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಮಳಲಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮ: ಪೊಲೀಸ್ ಆಯುಕ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.