ಮಂಗಳೂರು: ರಾಜ್ಯಸಭೆ ಪ್ರತಿಪಕ್ಷ ನಾಯಕ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಇಂದು ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡೀಸ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಬಳಿಕ ಮಾತನಾಡಿದ ಖರ್ಗೆ, ಸಾಕಷ್ಟು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ಆಸ್ಕರ್ ಫರ್ನಾಂಡೀಸ್ ಅವರನ್ನು ನೋಡಬೇಕೆಂದು ಪ್ರಯತ್ನ ಪಡುತ್ತಿದ್ದೆ. ಅವರ ಆರೋಗ್ಯ ವಿಚಾರಿಸಿ, ಅವರಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಕೊಳ್ಳಲು ಇಂದು ನಾನೇ ಖುದ್ದಾಗಿ ಆಸ್ಪತ್ರೆಗೆ ಬಂದಿದ್ದೇನೆ ಎಂದರು.
ಇದನ್ನೂ ಓದಿ: ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ
ಆಸ್ಕರ್ ಅವರು ಕಣ್ಣು ತೆರೆಯುವ ಪ್ರಯತ್ನ ಮಾಡುತ್ತಿದ್ದು, ಬೇಗನೆ ಗುಣಮುಖರಾಗುವ ಭರವಸೆ ಇದೆ. ಆದಷ್ಟು ಶೀಘ್ರವಾಗಿ ಗುಣಮುಖರಾಗಿ, ರಾಜಕೀಯ-ಸಾಮಾಜಿಕ ಚಟುವಟಿಕೆಗಳಲ್ಲಿ ಮಾರ್ಗದರ್ಶನ ನೀಡುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಯೋಗ ಮಾಡುವ ವೇಳೆ ಜಾರಿಬಿದ್ದ ಕಾಂಗ್ರೆಸ್ ಹಿರಿಯ ಮುಖಂಡ: ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು, ಅನಾರೋಗ್ಯಕ್ಕೊಳಗಾಗಿ ಕಳೆದ ಒಂದೂವರೆ ತಿಂಗಳಿನಿಂದ ಯೆನೆಪೊಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.