ಮಂಗಳೂರು: ಶಾಲೆಯೊಂದರ ಸಮೀಪ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಧ್ವ ನಿವಾಸಿ ಸತೀಶ್(47) ಬಂಧಿತ ಆರೋಪಿ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 3.24 ಲೀ. ಮದ್ಯ, 400 ರೂ. ನಗದು ಸಹಿತ ಸತೀಶ್ನನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.