ಮಂಗಳೂರು : ಲಾಕ್ಡೌನ್ ಪರಿಣಾಮ ನಗರ ಸಂಪೂರ್ಣ ಸ್ಥಗಿತಗೊಂಡಿದೆ. ಆದರು ಕೂಡ ಕೆಲವು ವಾಹನ ಸವಾರರು ಲಾಕ್ಡೌನ್ ನಿಯಮ ಉಲ್ಲಂಘಿಸಿ ಬೇಕಾ ಬಿಟ್ಟಿಯಾಗಿ ಓಡಾಟ ನಡೆಸುತ್ತಿರುವುದು ಕಂಡು ಬರುತ್ತಿದೆ.
ಅಗತ್ಯ ಸಾಮಾಗ್ರಿಗಳನ್ನು ಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕೊಟ್ಟಿದ್ದರು ಕೂಡ ಅನಗತ್ಯವಾಗಿ ಲಾಕ್ಡೌನ್ ಉಲ್ಲಂಘಿಸುತ್ತಿರುವವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಅಲ್ಲದೇ ವಾಹನಗಳನ್ನು ಸಹ ಜಪ್ತಿ ಮಾಡುತ್ತಿದ್ದಾರೆ.
ಜಿಲ್ಲೆಯ ಬಂಟ್ವಾಳದಲ್ಲಿ ಕೊರೊನಾ ಸೋಂಕಿನಿಂದ ಮಹಿಳೆ ಮೃತಪಟ್ಟ ಪರಿಣಾಮ ಜನರು ಬಹಳಷ್ಟು ಭಯ ಭೀತರಾಗಿದ್ದಾರೆ. ಅಲ್ಲದೆ ಉಪ್ಪಿನಂಗಡಿಯ ಕೊರೊನಾ ಸೋಂಕಿತ ವ್ಯಕ್ತಿಯ ಪತ್ನಿಗೂ ಇದೀಗ ಸೋಂಕು ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಸ್ಥಳೀಯರು ಸರ್ಕಾರದ ಆದೇಶ ಪಾಲಿಸಬೇಕೆಂದು ಪೊಲೀಸರು ವಿನಂತಿಸಿಕೊಳ್ಳುತ್ತಿದ್ದಾರೆ.