ETV Bharat / city

ಒಳ ಉಡುಪಿನಲ್ಲಿ ಚಿನ್ನ ಸಾಗಣೆ.. 739 ಗ್ರಾಂ ಬಂಗಾರ ವಶಕ್ಕೆ ಪಡೆದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು

ಅಕ್ರಮ ಚಿನ್ನ ಸಾಗಿಸುತ್ತಿದ್ದ ಕೇರಳ ಮೂಲದ ಮಹಿಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.

mangalore airport customs officers seized illegal gold
ಒಳ ಉಡುಪಿನಲ್ಲಿ ಚಿನ್ನ ಸಾಗಾಟ
author img

By

Published : Dec 16, 2021, 7:15 PM IST

ಮಂಗಳೂರು: ಮಹಿಳೆ ಒಳ ಉಡುಪಿನಲ್ಲಿ ಸಾಗಿಸುತ್ತಿದ್ದ 739 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ತಲಂಗರ ಎಂಬಲ್ಲಿನ ಮಹಿಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಪ್ರಯತ್ನಿಸಿ ಸಿಕ್ಕಿಬಿದ್ದ ಆರೋಪಿ. ಇಂದು ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಇವರನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಚಿನ್ನ ಪತ್ತೆಯಾಗಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಗಲಭೆ, ಲಾಠಿಚಾರ್ಜ್​ ಪ್ರಕರಣ: 10 ಮಂದಿ ಪಿಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪ್ಲಾಸ್ಟಿಕ್ ಪೌಚ್ ನಲ್ಲಿ ಹಾಕಿ ಒಳ ಉಡುಪಿನ ಒಳಭಾಗದಲ್ಲಿಟ್ಟು ಹೊಲಿಗೆ ಹಾಕಿ ಸಾಗಾಟ ಮಾಡುತ್ತಿದ್ದರು. 739 ಗ್ರಾಂ ಚಿನ್ನ ಪತ್ತೆಯಾಗಿದ್ದು ಇದರ ಮೌಲ್ಯ ರೂ 36,43,270 ಎಂದು ಅಂದಾಜಿಸಲಾಗಿದೆ. ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.