ETV Bharat / city

ಸರ್ಕಾರದಿಂದ ದಮನಕಾರಿ ನೀತಿ: ಮಾಜಿ ಸಚಿವ ರಮಾನಾಥ ರೈ

ಮಾಜಿ ಸಚಿವ ರಮಾನಾಥ ರೈ ಮುಂದಾಳತ್ವದಲ್ಲಿ ಸರ್ಕಾರದ ನೀತಿಗಳ ವಿರುದ್ಧ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಬಂಟ್ವಾಳ ಮತ್ತು ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

author img

By

Published : Aug 20, 2020, 8:53 PM IST

Protest
Protest

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕೊಡುಗೆಯಿಂದ ಬಡವರು ಇಂದು ಸ್ವಾಭಿಮಾನಿಗಳಾಗಿ ಬದುಕುತ್ತಿದ್ದು, ಈಗಿನ ಸರ್ಕಾರ ಉಳ್ಳವರ ಪರವಾಗಿರುವ ನೀತಿಗಳನ್ನು ತಂದು ಬಡವರ ಆಶಯಗಳಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಬಂಟ್ವಾಳ ಮತ್ತು ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಡೆದ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಜನವಿರೋಧಿಯಾಗಿದೆ, ಕೊರೊನಾ ನಿರ್ವಹಣೆ ವೇಳೆ ಭ್ರಷ್ಟಾಚಾರ ನಡೆದಿದೆ, ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ ಹಾಗೂ ನಾನಾ ಘಟಕಗಳ ನಾಯಕರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.