ETV Bharat / city

ಮಂಗಳೂರು ಹಿಂಸಾಚಾರ: ಎಸ್‌ಡಿಪಿಐ ಸಂಘಟನೆಯ ಇಬ್ಬರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು - ಮಂಗಳೂರು ಪ್ರತಿಭಟನೆ ದೇಶದ್ರೋಹ ಪ್ರಕರಣ ದಾಖಲು ಸುದ್ದಿ

ಕೇಂದ್ರ ಸರ್ಕಾರದ ಸಿಎಬಿ ಮತ್ತು ಎನ್​ಆರ್​ಸಿ ಕಾಯ್ದೆಗೆ ವಿರುದ್ಧ ವಾಟ್ಸ್​ಆ್ಯಪ್​ ಮೂಲಕ ಪ್ರಚೋದನೆ ನೀಡಿದ ಆರೋಪದಡಿ, ಎಸ್‌ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಸಾಹುಲ್ ಎಸ್.ಎಚ್ ಎಂಬವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

mangalore-citizenship-riot-case-of-treason-filed-against-two-leaders
ಮಂಗಳೂರು ಹಿಂಸಾಚಾರ
author img

By

Published : Dec 24, 2019, 7:53 AM IST

ಮಂಗಳೂರು : ನಗರದಲ್ಲಿ ಗುರುವಾರ ನಡೆದ ಪೌರತ್ವ ಗಲಭೆಗೆ ಸಂಬಂಧಿಸಿದಂತೆ ಎಸ್‌ಡಿಪಿಐನ ಇಬ್ಬರು ಮುಖಂಡರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಸಿಎಬಿ ಮತ್ತು ಎನ್​ಆರ್​ಸಿ ಕಾಯ್ದೆಗೆ ಸಂಬಂಧಿಸಿದಂತೆ ವಾಟ್ಸ್​ಆ್ಯಪ್​ ಮೂಲಕ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ, ಎಸ್‌ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಜ್‌ ಫರಂಗಿಪೇಟೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಸಾಹುಲ್ ಎಸ್. ಎಚ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಿ, ಜನರನ್ನು ತಪ್ಪು ದಾರಿಗೆಳೆದು ಉದ್ರೇಕಿಸಲಾಗಿದೆ. ಸರ್ಕಾರವನ್ನು ದ್ವೇಷ ಭಾವನೆಯಿಂದ ಕಾಣಲಾಗಿದೆ. ಜನಸಮೂಹದ ಮಧ್ಯೆ ಭಯ ಉಂಟುಮಾಡಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದ್ದಾರೆ. ಧರ್ಮಗಳು ಮತ್ತು ಸರ್ಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ದೊಂಬಿ ನಡೆಸಲು ಉದ್ದೇಶಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 124 ಎ, 153, 34ರಂತೆ ದೇಶದ್ರೋಹ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ನಗರದಲ್ಲಿ ಗುರುವಾರ ಗಲಭೆಗೆ ಸಂಬಂಧಿಸಿದಂತೆ ಎಸ್‌ಡಿಪಿಐನ ಇಬ್ಬರು ಮುಖಂಡರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಎಸ್‌ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಸಾಹುಲ್ ಎಸ್.ಎಚ್. ಎಂಬವರ ವಿರುದ್ಧ ಈ ಪ್ರಕರಣ ದಾಖಲಾಗಿದೆ.

ಇವರಿಬ್ಬರು ಸಿಎಬಿ ಹಾಗೂ ಎನ್ಆರ್ ಸಿ ಕಾಯ್ದೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಹಿಂಸಾರೂಪದ ಪ್ರತಿಭಟನೆಗೆ ವಾಟ್ಸ್‌ಆ್ಯಪ್‌ ಮೂಲಕ ಪ್ರಚೋದನೆ ನೀಡಿದ ಆರೋಪದಲ್ಲಿ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

Body:‘ಕೇಂದ್ರ ಸರಕಾರದ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಿ, ಜನರನ್ನು ತಪ್ಪು ದಾರಿಗೆ ಎಳೆದು ಉದ್ರೇಕಿಸಲಾಗಿದೆ. ಸರಕಾರವನ್ನು ಹೀನವಾಗಿ ದ್ವೇಷ ಭಾವನೆಯಿಂದ ಕಾಣಲಾಗಿದೆ. ಜನಸಮೂಹದ ಮಧ್ಯೆ ಭಯ ಉಂಟು ಮಾಡಿ ದ್ವೇಷದ ವಿಚಾರವನ್ನು ಹಬ್ಬಿಸುವ ಮೂಲಕ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದ್ದಾರೆ. ಧರ್ಮಗಳು ಮತ್ತು ಸರಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ದೊಂಬಿ ನಡೆಸಲು ಉದ್ದೇಶಿಸಿದ್ದರು’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 124 ಎ, 153, 34ರಂತೆ ದೇಶದ್ರೋಹ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.