ಮಂಗಳೂರು : ಕಾಮಗಾರಿ ಬಿಲ್ ಮಂಜೂರು ಮಾಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಮಹಾನಗರಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಅತೀಕ್ ರೆಹಮಾನ್‌ನನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಗುರುವಾರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ.
ಜಯಲಿಂಗಪ್ಪ ಎನ್ನುವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಭೀಕರ ಅಪಘಾತ : ಹೊತ್ತಿ ಉರಿದ ಬಸ್ನಲ್ಲಿ 8 ಜನ ಸಜೀವ ದಹನ ಶಂಕೆ!