ದಕ್ಷಿಣ ಕನ್ನಡ : ಮಂಗಳೂರು ವಿಶ್ವವಿದ್ಯಾಲಯದಿಂದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸ ಶಿಕ್ಷಣ ನೀತಿ ವಿಚಾರವಾಗಿ ನಡೆದ ಕಾರ್ಯಕ್ರಮದಲ್ಲಿ ಎಬಿವಿಪಿ ಸಂಘಟನೆಯನ್ನು ಮಾತ್ರ ಆಹ್ವಾನಿಸಿರುವುದನ್ನು ವಿರೋಧಿಸಿ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರು, ಕಾರ್ಯಕ್ರಮಕ್ಕೆ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಆಹ್ವಾನಿಸಬೇಕಿತ್ತು. ಆದರೆ ಒಂದು ಸಂಘಟನೆಯನ್ನು ಮಾತ್ರ ಕರೆದಿದ್ದಾರೆ. ಇದು ಖಂಡನೀಯ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಲದೆ ವಿವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದರು.