ETV Bharat / city

Mangaluru Rape and Murder case: ಆರೋಪಿಗಳನ್ನು ಗುಂಡಿಕ್ಕಿ ಸಾಯಿಸಲು ಕಾಂಗ್ರೆಸ್ ಮುಖಂಡೆ ಆಗ್ರಹ

ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಆಗ್ರಹಿಸಿದ್ದಾರೆ.

congress leader pratibha
ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ
author img

By

Published : Nov 25, 2021, 4:40 PM IST

ಮಂಗಳೂರು: ಮಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಹೇಳಿದರು. ಸಣ್ಣ ಮಕ್ಕಳ ಮೇಲೆ ಪೈಶಾಚಿಕ ಕೃತ್ಯಗಳು ಹೆಚ್ಚಾಗುತ್ತಿದ್ದು, ಕಾಮುಕರಿಗೆ ಸರಿಯಾದ ಪಾಠ ಕಲಿಸುವಂತೆ ಅವರು ಆಗ್ರಹಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ನೀರಿನ ಟ್ಯಾಂಕ್​ನಲ್ಲಿ ಬಿಸಾಡಲಾಗಿತ್ತು. ಇದೀಗ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದು ಚರಂಡಿಗೆ ಬಿಸಾಡಲಾಗಿದೆ. ಪ್ರಕರಣದ ಆರೋಪಿಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಒತ್ತಾಯಿಸಿದರು.

ಮಕ್ಕಳ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಆರೋಪಿಗಳ ಪರ ಯಾವುದೇ ವಕೀಲರು ವಾದ ಮಂಡಿಸಬಾರದು. ಹೈದರಾಬಾದ್​ನಲ್ಲಿ ಅತ್ಯಾಚಾರಗೈದ ಆರೋಪಿಗಳನ್ನು ಗುಂಡಿಕ್ಕಿ ಸಾಯಿಸಿದಂತೆ ಇವರಿಗೂ ಗುಂಡಿಕ್ಕಬೇಕು ಎಂದು ಪ್ರತಿಭಾ ಗುಡುಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಕೋಮಿನ ಅತ್ಯಾಚಾರಗಳ ಬಗ್ಗೆ ಯಾರೂ ಧ್ವನಿಯೆತ್ತುತ್ತಿಲ್ಲ. ಅನ್ಯಕೋಮಿನಿಂದ ಆದ ಅತ್ಯಾಚಾರ ಪ್ರಕರಣ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಜಕೀಯಕ್ಕಾಗಿ ಈ ರೀತಿ ಮಾಡುವುದನ್ನು ಬಿಟ್ಟು ಎಲ್ಲಾ ಅತ್ಯಾಚಾರ ಪ್ರಕರಣಗಳ ವಿರುದ್ಧ ಧ್ವನಿಯೆತ್ತಬೇಕು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.