ಮಂಗಳೂರು: ಪೌರತ್ವ ಕಾಯ್ದೆ ವಿರುದ್ಧ ನಗರದಲ್ಲಿ ಗುರುವಾರ ನಡೆದ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಸಿಸಿ ಟಿವಿ ದೃಶ್ಯಗಳನ್ನು ನಗರ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಪೌರತ್ವ ಕಾಯ್ದೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ದಿನ ಯಾರೂ ಕಲ್ಲು ತೂರಾಟ ನಡೆಸಿಲ್ಲ. ಪ್ರತಿಭಟನೆ ಶಾಂತಿಯುವಾಗಿ ನಡೆಯುತ್ತಿತ್ತು. ಆದ್ರೂ ಪೊಲೀಸರು ಲಾಠಿ ಪ್ರಹಾರ ಮಾಡಿ, ಗೋಲಿಬಾರ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದ್ದರಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ಗಲಭೆಗಳಿಗೆ ಸಂಬಂಧಿಸಿದಂತೆ ಯಾವುದೇ ಫೋಟೋ ಅಥವಾ ವಿಡಿಯೋ ಇದ್ದಲ್ಲಿ mangalurunorthmgc@gmail.com ಅಥವಾ 9480802327 ಗೆ ವಾಟ್ಸಾಪ್ ಕಳುಹಿಸುವಂತೆ ಟ್ವೀಟ್ ಮಾಡಿದ್ದರು.