ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಶಾಸಕ ಜೆ.ಆರ್.ಲೋಬೋ ವಿರುದ್ಧ ಕಾಂಗ್ರೆಸ್ ಟಿಕೆಟ್ ವಂಚಿತ ಬಿಲಾಲ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ರಮಾನಾಥ ರೈ,ಯು.ಟಿ.ಖಾದರ್,ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪತ್ರಿಕಾಗೋಷ್ಠು ಮುಗಿಸಿ ಹೊರಬರುತ್ತಿದ್ದಂತೆ,ಬಿಲಾಲ್ ಬೆಂಬಲಿಗರು ಟಿಕೆಟ್ ನಿರಾಕರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
'ಜೆಡಿಎಸ್ನಿಂದ ಬಂದವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಬೆಲೆ ಇಲ್ಲದಂತಾಗಿದೆ. ಇದಕ್ಕೆ ಕಾರಣ ಮಾಜಿ ಶಾಸಕ ಜೆ.ಆರ್.ಲೋಬೋ. ಅವರಿಗೆ ಧಿಕ್ಕಾರ, ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದೇವೆ. ಮಾತ್ರವಲ್ಲದೆ,ಮುಂದಿನ 30 ವರ್ಷ ಬಿಜೆಪಿಯ ವೇದವ್ಯಾಸ ಕಾಮತ್ ಶಾಸಕರಾಗಿ ಇರುತ್ತಾರೆ,' ಎಂದು ಘೋಷಣೆ ಕೂಗಿದರು.