ETV Bharat / city

ಮಂಗಳೂರಲ್ಲಿ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ‌ ಆತ್ಮಹತ್ಯೆ - ಎಂಬಿಬಿಎಸ್ ವಿದ್ಯಾರ್ಥಿನಿ‌ ಆತ್ಮಹತ್ಯೆ

MBBS student committed suicide in Mangalore: ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರು ಬಳಿ ನಡೆದಿದೆ.

ವಿದ್ಯಾರ್ಥಿನಿ‌ ಆತ್ಮಹತ್ಯೆ
ವಿದ್ಯಾರ್ಥಿನಿ‌ ಆತ್ಮಹತ್ಯೆ
author img

By

Published : Dec 20, 2021, 8:16 AM IST

ಮಂಗಳೂರು: ನಗರದ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಎಂಬಿಬಿಎಸ್ ಇಂಟರ್​ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಆನಂದನಗರ ನಿವಾಸಿ ವೈಶಾಲಿ ಗಾಯಕವಾಡ್ (25) ಮೃತ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ವೈಶಾಲಿ ಮಂಗಳೂರು ನಗರದ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ಇಂಟರ್​ಶಿಪ್ ಮಾಡುತ್ತಿದ್ದಳು. ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ ಇವಳು, ಭಾನುವಾರ ತಾನು ವಾಸವಾಗಿದ್ದ ಕುತ್ತಾರಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್​ವೊಂದರ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.