ETV Bharat / city

ಮಂಗಳೂರು ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕರ ಜಮಾವಣೆಯಲ್ಲಿ ಪೂರ್ವಯೋಜಿತ ಕೈವಾಡ: ಕಟೀಲ್​ - lockdown news update

ಕಾಂಗ್ರೆಸ್ ಅತಂತ್ರ ಸ್ಥಿತಿ ನಿರ್ಮಿಸುತ್ತಿದೆ. ಇಂತಹ ಸಮಯದಲ್ಲಿ ರಾಜಕೀಯ ಬೇಡ. ಎಲ್ಲರೂ ಒಂದಾಗಿ, ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದರು.

Migrant workers locked at mangalore
ಸಂಸದ ನಳಿನ್ ಕುಮಾರ್ ಕಟೀಲ್​
author img

By

Published : May 8, 2020, 10:06 PM IST

ಮಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೊರೊನಾ ವಿರುದ್ಧ ಹೋರಾಡುತ್ತಿವೆ. ಆದರೆ ಕಾಂಗ್ರೆಸ್ ಮಾತ್ರ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಆರೋಪಿಸಿದರು.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಜಮಾಯಿಸಿರುವ ಉತ್ತರ ಭಾರತದ ಕಾರ್ಮಿಕರ ಕೈಯಲ್ಲಿ ಇಂಗ್ಲಿಷ್, ಕನ್ನಡದ ಫಲಕಗಳು ಎಲ್ಲಿಂದ ಬಂದಿವೆ ಎಂಬುದು ನಮಗೆ ಗೊತ್ತಾಗಿದೆ. ಅಲ್ಲಿ ಮೈಕ್ ವ್ಯವಸ್ಥೆ ಮಾಡಲಾಗಿತ್ತು. ಅದು ಹೇಗೆ ಸಾಧ್ಯ? ಕಾಂಗ್ರೆಸ್ ಇದರಲ್ಲಿ ಪೂರ್ವಯೋಜಿತ ರಾಜಕಾರಣ ಮಾಡುತ್ತಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಕೊರೊನಾ ಹರಡಲು ಕಾಂಗ್ರೆಸ್ ಪಕ್ಷವೇ ಕಾರಣ ಆಗಲಿದೆ ಎಂದು ಕಿಡಿಕಾರಿದರು.

ನಳಿನ್ ಕುಮಾರ್ ಕಟೀಲ್​

ವಲಸೆ ಕಾರ್ಮಿಕರಿಗೆ ಅವರ ತವರಿಗೆ ಕಳುಹಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದರೂ ಇದರಲ್ಲೂ ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ. ಚೆಕ್​​​ಗಳನ್ನು ಕೊಡುತ್ತೇವೆ ಎಂಬ ನಾಟಕ ಮಾಡಲಾಯಿತು. ವಲಸೆ ಕಾರ್ಮಿಕರ ಬಗ್ಗೆ ಕನಿಕರದ ಕಣ್ಣೀರು ಹಾಕುವಂತಹ ಕೆಲಸ ಮಾಡಿ ಕಾಂಗ್ರೆಸ್ ತನ್ನ ರಾಜಕೀಯ ಬೇಳೆಯನ್ನು ಬೇಯಿಸುತ್ತಿದೆ ಎಂದು ಹರಿಹಾಯ್ದರು.

ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ವಲಸೆ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ. ಆದರೆ, ಕಾಂಗ್ರೆಸ್ ಗಲಭೆ ಸೃಷ್ಟಿಸುತ್ತಿದೆ. ಪಿತೂರಿ ನಡೆಸುತ್ತಿದೆ. ಅಂತಾರಾಜ್ಯ ವಲಸೆ ಕಾರ್ಮಿಕರಿಗಾಗಿ ಸೇವಾ ಸಿಂಧು ಆ್ಯಪ್ ಮೂಲಕ ನೋಂದಣಿ ಆರಂಭಿಸಲಾಗಿದೆ. ಬೇರೆ ರಾಜ್ಯಗಳಿಗೆ ವಿವಿಧ ದಿನಗಳನ್ನು ನಿಗದಿಪಡಿಸಿ ವಲಸೆ ಕಾರ್ಮಿಕರನ್ನು ರೈಲುಗಳ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.