ಮಂಗಳೂರು : ಗಾಂಧಿ ಜಯಂತಿ ಹಿನ್ನೆಲೆ ರಾಜ್ಯದ ಎಲ್ಲ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ಇಂದು ಬೆಳಗ್ಗೆ ಏಕ ಕಾಲದಲ್ಲಿ ಸ್ವಚ್ಛತಾ ಆಂದೋಲನ ಜರುಗಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕದ್ರಿಯಲ್ಲಿರುವ ಹಾಸ್ಟೆಲ್ನ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಬೆಳಗ್ಗೆ 8 ರಿಂದ ಮಧ್ಯಾಹ್ನ 12ರವರೆಗೆ ಈ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ನಲ್ಲಿ ಬೆಳಗ್ಗೆಯೇ ಹಾಜರಾದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಸ್ವಚ್ಛತಾ ಕಾರ್ಯ ಕೈಗೊಂಡರು. ಈ ಸಂದರ್ಭ ಇಡೀ ಹಾಸ್ಟೆಲ್ನ ಸ್ವಚ್ಛತಾ ಕಾರ್ಯ ನೆರವೇರಿತು.
ಇದನ್ನೂ ಓದಿ: ಸಿದ್ದಗಂಗಾ ಮಠ, ವಾತ್ಸಲ್ಯಧಾಮ ಆಶ್ರಮ ಟ್ರಸ್ಟ್ಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ
ಈ ಸಂದರ್ಭದಲ್ಲಿ ಸಚಿವರೊಂದಿಗೆ ಹಾಸ್ಟೆಲ್ ವಿದ್ಯಾರ್ಥಿಗಳು, ಸಿಬ್ಬಂದಿ ಕೂಡ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಇದೇ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆಗೆ ಸಚಿವ ಕೋಟ ಬೆಳಗಿನ ಉಪಹಾರ ಸೇವಿಸಿದರು.