ETV Bharat / city

ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಪ್ರತಿಭಟನೆ: ಸುನೀಲ್ ಕುಮಾರ್ - Objection to Ganesh festival in government schools

ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ. ಸಾವರ್ಕರ್ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯ ಸಿದ್ಧವಿಲ್ಲ. ಹಾಗಾಗಿ ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

Minister Sunil Kumar speak about the egg thrown on Siddaramaiah
ಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ
author img

By

Published : Aug 19, 2022, 10:34 PM IST

ಉಡುಪಿ: ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯಗೆ ಮೊಟ್ಟೆ ಎಸೆದು ಪ್ರತಿಭಟಿಸುತ್ತಿರುವ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ಯಾರೋ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ. ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತದೆ. ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ. ಸಾವರ್ಕರ್ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯ ಸಿದ್ಧವಿಲ್ಲ ಎಂದು ಅವರು ಕಿಡಿಕಾರಿದರು.

ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗಲ್ಲ. ಸಾವರ್ಕರ್ ಫೋಟೋ ಕಂಡರೆ ಆಗಲ್ಲ. ತಮ್ಮ ನಡವಳಿಕೆ, ಹೇಳಿಕೆಯಿಂದ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ. ಇದನ್ನು ಕರ್ನಾಟಕದ ಜನ ಸಹಿಸುವುದಿಲ್ಲ. ಹಾಗಾಗಿ ಪ್ರತಿಭಟಿಸುತ್ತಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದರು.

ಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ

ಪ್ರತಿಭಟನೆ ಸಹಿಸುವ ಶಕ್ತಿಯೂ ಇರಬೇಕು: ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ. ಅವರ ಹೋರಾಟದ ಕಾರಣಕ್ಕೆ ಅವರನ್ನು ವೀರ ಸಾವರ್ಕರ್ ಎಂದು ಕರೆದಿದ್ದಾರೆ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಅಂದರೆ ಇತಿಹಾಸದ ಬಗ್ಗೆ ಅರ್ಧಂಬರ್ದ ತಿಳಿದುಕೊಂಡಿದ್ದಾರೆ ಎಂದರ್ಥ. ಸಾವರ್ಕರ್ ಅಂತಸತ್ವ ತಿಳಿದವರು ಯಾರು ಅವರನ್ನು ಟೀಕಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ

ಸಿದ್ದರಾಮಯ್ಯನವರೇ ದಯಮಾಡಿ ಅಂಡಮಾನಿನ ಸೆಲ್ಯೂಲರ್ ಜೈಲು ನೋಡಿಕೊಂಡು ಬನ್ನಿ. ಸಮಾಜವಾದಿ ಎಂದು ಹೇಳಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟುಹಬ್ಬ ಮಾಡುತ್ತೀರಿ. ಸಾವರ್ಕರ್ ಇದ್ದ ಜೈಲನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ಅವರು ನಡೆಸಿದ ಹೋರಾಟ ಮತ್ತು ಬ್ರಿಟಿಷರ ಕ್ರೂರತೆ ಯಾವ ರೀತಿ ಇತ್ತು ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಗಣಪತಿ ಹಬ್ಬಕ್ಕೆ ಅಡ್ಡ ಬಂದ್ರೆ ಸರಿಯಾದ ಬೆಲೆ ತೆರಬೇಕಾಗುತ್ತದೆ: ಕೆ ಎಸ್ ಈಶ್ವರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.