ETV Bharat / city

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ಸ್ಪರ್ಶ: ಸಚಿವ ಸುನಿಲ್ ಕುಮಾರ್ - Minister sunil kumar

ಸಚಿವರಾಗಿ ಆಯ್ಕೆಗೊಂಡ ಬಳಿಕ ಸಚಿವ ಸುನಿಲ್ ಕುಮಾರ್ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

Minister sunil kumar
ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಸಚಿವ ಸುನಿಲ್ ಕುಮಾರ್
author img

By

Published : Aug 9, 2021, 11:07 AM IST

ಬಂಟ್ವಾಳ: ನನಗೆ ವಹಿಸಿಕೊಟ್ಟ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನದ ಸ್ಪರ್ಶ ನೀಡುವ ಮೂಲಕ ಕೆಲಸ ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಸಚಿವ ಸುನಿಲ್ ಕುಮಾರ್

ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ಶುಕ್ರವಾರ ನಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದರು. ಸಚಿವರಾಗಿ ಆಯ್ಕೆಯಾದ ಬಳಿಕ ಸುನಿಲ್ ಕುಮಾರ್ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಆರಂಭದಲ್ಲಿ ಬಂಟ್ವಾಳದ ಪ್ರಸಿದ್ಧ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.