ಮಂಗಳೂರು: ನಗರದ ಖ್ಯಾತ ವೈದ್ಯರಾದ ತೇಜಸ್ವಿನಿ ಆಸ್ಪತ್ರೆಯ ಚೇರ್ಮನ್ ಡಾ.ಶಾಂತರಾಮ ಶೆಟ್ಟಿಯವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಯಾಗಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತರೊಬ್ಬರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದ ಡಾ.ಶಾಂತರಾಮ ಶೆಟ್ಟಿಯವರು ತಮ್ಮ ನಕಲಿ ಫೇಸ್ಬುಕ್ ಸೃಷ್ಟಿಯಾಗಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಮ್ಮ ನಕಲಿ ಫೇಸ್ಬುಕ್ ಅನ್ನು ಸೃಷ್ಟಿಸಿ ಫೊರೆಕ್ಸ್ ಟ್ರೇಡ್ ಗಳಿಗೆ ಸಂಬಂಧಿಸಿದ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.