ಮಂಗಳೂರು: ಕೊರೊನಾ ವೈರಸ್ ತಡೆಯುವ ಹಿನ್ನೆಲೆಯಲ್ಲಿ ಸಾಮಾಜಿಕ ತಾಣಗಳಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಲಾಕ್ಡೌನ್ ಆದೇಶ ಪಾಲಿಸುತ್ತಾ ಮಗನಿಗೆ ಸ್ವಚ್ಛತೆಯ ಕುರಿತು ತಿಳಿಸಿಕೊಟ್ಟಿದ್ದಾರೆ.
ಕೊರೊನಾ ವೈರಸ್ ನಮ್ಮ ದೇಹ ಪ್ರವೇಶಿಸದಂತೆ ತಡೆಯಲು ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಂತ ಮುಖ್ಯ. ಇದನ್ನು ನಾಗರಿಕರಿಗೆ ಮನದಷ್ಟು ಮಾಡುವ ನಿಟ್ಟಿನಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಕೈಗಳನ್ನು ತೊಳೆಯುವ ಸರಿಯಾದ ವಿಧಾನವನ್ನು ತಮ್ಮ ಮಗನಿಗೆ ತೋರಿಸಿಕೊಡುವ ಮೂಲಕ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅವರು ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.