ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಲಿದ್ದು, ಡಿಸೆಂಬರ್ 9ರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವ ಶೂನ್ಯವಾಗಲಿದೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲುವ ಮೂಲಕ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವ ಶೂನ್ಯವಾಗಲಿದೆ. ಯಲ್ಲಾಪುರದಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಮೈತ್ರಿ ಬಗ್ಗೆ ಮಾತನಾಡಿದ ಶಾಸಕರು, ಅಲ್ಲಿ ತಾತ್ಕಾಲಿಕ ಹೊಂದಾಣಿಕೆ ಮಾಡಿದ್ದಾರೆ. ಆ ಸರ್ಕಾರ ಬಹಳ ದಿನ ಬದುಕಲ್ಲ ಎಂದರು.