ETV Bharat / city

ಶಾಲೆಗಳು ಆರಂಭಿಸಲು ಇನ್ನೂ ಕಾಲ ಪಕ್ವವಾಗಿಲ್ಲ: ಎಸ್.ಎಲ್.ಭೋಜೇಗೌಡ - PUC Exam

ಆರೋಗ್ಯ ಇಲಾಖೆ ಸಮರ್ಪಕವಾದ ಅಭಿಪ್ರಾಯ ತಿಳಿಸಿದ ಬಳಿಕವೇ ಶಾಲೆ ಆರಂಭಿಸುವುದು ಉತ್ತಮ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

MLC Bojegowda
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ
author img

By

Published : Jun 22, 2020, 7:39 PM IST

ಮಂಗಳೂರು: ಶಾಲೆಗಳು ಆರಂಭಿಸಲು ಇನ್ನೂ ಕಾಲ ಪಕ್ವವಾಗಿಲ್ಲ. ಈಗಲೇ ಶಾಲೆ ಆರಂಭಿಸಿದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಿತರಾಗುತ್ತಾರೆ. ಶಾಲೆ ಆರಂಭಿಸಲು ಆರೋಗ್ಯ ಇಲಾಖೆ ಮತ್ತು ಪೋಷಕರ ಅಭಿಪ್ರಾಯ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್​​​​ಸಿ, ಪಿಯುಸಿ ಪರೀಕ್ಷೆಯನ್ನು ಮುಂದೂಡುವಾಗ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಇರಲಿಲ್ಲ. ಆದರಿಂದು ಪ್ರತಿ ಜಿಲ್ಲೆಗಳಲ್ಲಿ ಸೋಂಕಿತರಿದ್ದಾರೆ. ಬಾಕಿಯಿದ್ದ ಪಿಯುಸಿ ಇಂಗ್ಲಿಷ್​​ ಪರೀಕ್ಷೆಯನ್ನು ಅಂದೇ ಮಾಡಿ ಮುಗಿಸಬಹುದಿತ್ತು. ಆಗಲೇ ಮಾಡಿ ಮುಗಿಸಿದ್ದರೆ ಇಷ್ಟೊಂದು ತೊಂದರೆಗಳು ಬರುತ್ತಿರಲಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ

ಅನುದಾನಿತ ಹಾಗೂ ಸರ್ಕಾರಿ ಶಾಲೆಯ ಶಿಕ್ಷಕರಿಗೆ ವೇತನಕ್ಕೆ ತೊಂದರೆಯಾಗುವುದಿಲ್ಲ. ಆದರೆ, ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. 3-4 ತಿಂಗಳಿನಿಂದ ಅವರಿಗೆ ಸಂಬಳ ಬಂದಿಲ್ಲ. ಇದಕ್ಕೆ ಸರ್ಕಾರವೇ ಹೊಣೆ ಎಂದು ತಿಳಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯ ಮೂಲಕ ಖಾಸಗಿ ಶಾಲೆಗಳಿಗೆ ₹ 680 ಕೋಟಿ ಇನ್ನೂ ಬಿಡುಗಡೆಯಾಗಿಲ್ಲ. ವಾರದೊಳಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಕೂಡ ಹೇಳಿದ್ದರು. ಆದರೆ, ತಿಂಗಳು ಕಳೆಯಿತು. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.