ETV Bharat / city

ಹಲವು ಪ್ರಕರಣಗಳ ಆರೋಪಿ ಗಾಂಜಾ ಕೇಸ್​​ನಲ್ಲಿ ಪೊಲೀಸರ​​​​ ವಶಕ್ಕೆ - Mangalore

ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ಗಾಂಜಾ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಲವು ಪ್ರಕರಣಗಳ ಆರೋಪಿ ಪೊಲೀಸ್ ವಶಕ್ಕೆ
author img

By

Published : Sep 22, 2019, 6:04 AM IST

ಮಂಗಳೂರು: ಗಾಂಜಾ ಹೊಂದಿರುವ ಆರೋಪಿಯನ್ನು‌‌ ಬಂಧಿಸಿರುವ ಧರ್ಮಸ್ಥಳ ಠಾಣಾ ಪೊಲೀಸರು 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಗಂಗೋತ್ರಿ ವಸತಿ ಗೃಹದ ಬಳಿ ನಡೆದಿದೆ.

ಉಳಾಯಿಬೆಟ್ಟು ಗ್ರಾಮದ ನಿವಾಸಿ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಯು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಸಬ್ ಜೈಲಿನಲ್ಲಿ ನಡೆದ ಮಾಡೂರು ಇಸುಬು ಎಂಬಾತನ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೆ ಈತನ ಮೇಲೆ ಮಂಗಳೂರು ಉತ್ತರ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಮುಲ್ಕಿ ಠಾಣೆಯಲ್ಲಿ ಡಕಾಯಿತಿಗೆ ಯತ್ನ ಪ್ರಕರಣಗಳು ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.

ಈತ ಈ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದಾನೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

Intro:ಮಂಗಳೂರು: ಗಾಂಜಾ ಹೊಂದಿರುವ ಆರೋಪಿಯನ್ನು‌‌ ಬಂಧಿಸಿರುವ ಧರ್ಮಸ್ಥಳ ಠಾಣಾ ಪೊಲೀಸರು 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಗಂಗೋತ್ರಿ ವಸತಿ ಗೃಹದ ಬಳಿ ನಡೆದಿದೆ.

ಉಳಾಯಿಬೆಟ್ಟು ಗ್ರಾಮದ ನಿವಾಸಿ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ.

ನಿನ್ನೆ ಮಧ್ಯರಾತ್ರಿ 1.30 ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕ ಸಿಬ್ಬಂದಿಯೊಂದಿಗೆ ಧರ್ಮಸ್ಥಳದ ಗಂಗೋತ್ರಿ ವಸತಿ ಗೃಹದ ಬಳಿ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದೊಂದಿಗೆ ಆರೋಪಿ ಪ್ರದೀಪ್ ಪೂಜಾರಿ ಅನುಮಾನಾಸ್ಪದವಾಗಿ ನಿಂತಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ತಡೆದು ವಿಚಾರಿಸಿದಾಗ ದ್ವಿಚಕ್ರ ವಾಹನದಲ್ಲಿ ಸುಮಾರು 60 ಗ್ರಾಂ ಗಾಂಜಾ ದೊರೆತಿದೆ. ಈ ಬಗ್ಗೆ ವಿಚಾರಿಸಿದಾಗ ಈ ಗಾಂಜಾವನ್ನು ತನ್ನ ಸ್ವಂತ ಉಪಯೋಗಕ್ಕೆ ಮತ್ತು ಮಾರಾಟ ಮಾಡುವುದಕ್ಕಾಗಿ ಇರಿಸಿರುವುದಾಗಿ ತಿಳಿಸಿರುತ್ತಾನೆ.

Body:ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸದ್ರಿ ಆರೋಪಿಯು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಸಬ್ ಜೈಲ್ ನಡೆದ ಮಾಡೂರು ಇಸುಬು ಎಂಬಾತನ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೆ ಈತನ ಮೇಲೆ ಮಂಗಳೂರು ಉತ್ತರ ಠಾಣೆಯಲ್ಲಿ ಕೊಲೆಗೆ ಯತ್ನ ಮತ್ತು ಮುಲ್ಕಿ ಠಾಣೆಯಲ್ಲಿ ಡಕಾಯಿತಿಗೆ ಯತ್ನ ಪ್ರಕರಣಗಳು ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈತನು ಈ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿತನಾಗಿರುತ್ತಾನೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.