ಮಂಗಳೂರು: ಮಂಗಳೂರಿನಲ್ಲಿ ಇಂದು 10 ಮಂದಿ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 21 ಮಂದಿ ವರದಿಯಲ್ಲಿ ನೆಗೆಟಿವ್ ಬಂದಿದೆ.
ಈವರೆಗೂ ಲ್ಯಾಬ್ಗೆ ಕಳುಹಿಸಿದ 331 ಮಂದಿಯಲ್ಲಿ 12 ಪಾಸಿಟಿವ್ ವರದಿ ಬಂದಿವೆ. ಇಂದು 21 ಮಂದಿ ಸೇರಿದಂತೆ ಇಲ್ಲಿಯವರೆಗೂ 38,652 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಹೋಮ್ ಕ್ವಾರಂಟೈನ್ನಲ್ಲಿ 4,237, ಇಎಸ್ಐ ಆಸ್ಪತ್ರೆ ಕ್ವಾರಂಟೈನ್ನಲ್ಲಿ 10 ಮಂದಿ ಇದ್ದಾರೆ. ಇಂದಿಗೆ 1,709 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.